ನ್ಯಾಯಾಲಯಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಅಧಿಕಾರಿಗಳಿಗೆ ಮನವಿ

ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಭಯದ ವಾತಾವರಣ ಸೃಷ್ಟಿಸುವ ದುರುದ್ದೇಶದ ಕೃತ್ಯವಾಗಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯವು ನ್ಯಾಯದ ದೇವಾಲಯವಾಗಿದ್ದು, ಇಂತಹ ಬೆದರಿಕೆಗಳು ನ್ಯಾಯಾಂಗದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಪ್ರಯತ್ನಗಳಾಗಿವೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ಬೆದರಿಕೆಯ ಹಿಂದಿರುವ ವ್ಯಕ್ತಿಗಳು ಅಥವಾ ಸಂಘಟನೆಗಳನ್ನು ಶೀಘ್ರ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘ ಒತ್ತಾಯಿಸಿದೆ. ನ್ಯಾಯಾಲಯದ ಭದ್ರತೆಯನ್ನು ಮತ್ತಷ್ಟು ಬಲಪಡಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”