23 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದ ನ್ಯಾಯಧೀಶ ಶ್ರೀನಿವಾಸ್ ಸುವರ್ಣ

ಉಡುಪಿ: ವಕೀಲರ ಸಂಘ ಉಡುಪಿ ವತಿಯಿಂದ ಆಯೋಜಿಸಿದ್ದ ಮಹಿಳಾ ದಿನಾಚರಣೆಯನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಧೀಶೆ ಕೆ.ಎಸ್.ಜ್ಯೋತಿಶ್ರೀ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಹಿಳೆಯರು ತಾಯಿ, ಅಕ್ಕಾ, ಮಡದಿ, ಮಗಳು, ಅಧಿಕಾರಿಯಾಗಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಬಲ್ಲಳು. ಈ ಹಿನ್ನೆಲೆಯಲ್ಲಿ ವಕೀಲರ ಸಂಘ ಆಯೋಜಿಸಿದ ಮಹಿಳಾ ದಿನಾಚರಣೆ ಬಹಳ ಅರ್ಥಪೂರ್ಣವಾಗಿದೆ ಎಂದು ನುಡಿದರು. ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶ್ವೇತಾಕ್ಷಿ ಶುಭ ಹಾರೈಸಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ಕಿರಣ್.ಎಸ್.ಗಂಗಣ್ಣನವರ್ ಅಧ್ಯಕ್ಷತೆ ವಹಿಸಿದ್ದರು. ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಧೀಶ ಸಮೀವುಲ್ಲಾ, ನ್ಯಾಯಧೀಶರುಗಳಾದ ಯೋಗಿಶ್ ಪಿಆರ್, ಸಂತೋಷ್ ಶ್ರೀವಾಸ್ತವ, ಮನುಪಟೇಲ್, ವಕೀಲರ ಸಂಘದ ಉಪಾಧ್ಯಕ್ಷ ದೇವದಾಸ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯದರ್ಶಿ ಸಾವಿತ್ರಿ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ ವಂದಿಸಿದರು. ಇದೇ ಸಂದರ್ಭದಲ್ಲಿ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರ ಕಾರ್ಯ ಮಾಡುತ್ತಿರುವ ಜಲಜಾ ಪೂಜಾರ್ತಿಯವರನ್ನು ಸನ್ಮಾನಿಸಲಾಯಿತು.
“ನಿವೃತ್ತ ನ್ಯಾಯಾಧೀಶ ಶ್ರೀನಿವಾಸ್ ಸುವರ್ಣ ಅವರು ಬೀಳ್ಕೊಡುಗೆ ಸನ್ಮಾನವನ್ನು ಸ್ವೀಕರಿಸಿ, 23 ವರ್ಷಗಳ ಸೇವಾ ಅವಧಿಯಲ್ಲಿ ನಿಷ್ಪಕ್ಷಪಾತವಾಗಿ, ಪ್ರಾಮಾಣಿಕವಾಗಿ ನ್ಯಾಯದಾನ ಮಾಡಿದ ತೃಪ್ತಿ ಇದೆ ಎಂದವರು ನುಡಿದರು.”
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”