ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
ಉಡುಪಿ: ಜಿಲ್ಲೆಯ ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿಯಲ್ಲಿ ನಡೆದ ಡೇವಿಡ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯಾದ ಸೂರಜ್ನನ್ನು ಬಂಧಿಸಲಾಗಿದೆ. ಆರೋಪಿಗಳಾದ ಚಿರಾಗ್ ಹಾಗು ಇರ್ಷಾದ್, ಶೂಟರ್ ರಾಜುವಿಗೆ ನೀಡಬೇಕಾದ ಹಣವನ್ನು ಬಿಹಾರ ಮೂಲದ ಸೂರಜ್ನ ಖಾತೆಗೆ ವರ್ಗಾಯಿಸಿರುತ್ತಾರೆ. ಆರೋಪಿಗಳ ಬ್ಯಾಂಕ್ ಖಾತೆ ಹಾಗು ಫೋನ್ ಕರೆಗಳನ್ನು ಪರಿಶೀಲಿಸಿದಾಗ ದೊರಕಿದ ಮಾಹಿತಿಯ ಮೇರೆಗೆ ಬಾಂಬೆ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳಿದ ತಂಡವು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಗುರುವಾರ ಈತನನ್ನು ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶ ಹಾಗು ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ನ್ಯಾಯಧೀಶ ಎಮ್.ಪುರುಷೋತ್ತಮ್ ಅವರ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”