ಸುಮಾರು 21 ಕೋಟಿ ರೂ.ಪರಿಹಾರ ವಿತರಣೆ

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರಿನ ವಿವಿಧ ನ್ಯಾಯಾಲಯಗಳಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತನಲ್ಲಿ ಒಂದೇ ದಿನ ಒಟ್ಟು 38,369 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಇವುಗಳಲ್ಲಿ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ-33, ಚೆಕ್ಕು ಅಮಾನ್ಯ ಪ್ರಕರಣ- 391, ಬ್ಯಾಂಕ್/ಹಣ ವಸೂಲಾತಿ ಪ್ರಕರಣ -05, ಎಂ.ವಿ.ಸಿ ಪ್ರಕರಣ -99, ಸಿವಿಲ್ ಪ್ರಕರಣ- 273, ಎಂ.ಎಂ.ಆರ್.ಡಿ ಪ್ರಕರಣ- 2, ವಿದ್ಯುತ್ ಕಾಯಿದೆ ಪ್ರಕರಣ-1, ಇತರೇ ಕ್ರಿಮಿನಲ್ ಪ್ರಕರಣ - 2094, ಕಾರ್ಮಿಕ ವ್ಯಾಜ್ಯ-11 ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು 35,460ಗಳು ಸೇರಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರಯ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಬಾರಿಯ ಲೋಕಅದಾಲತ್ನಲ್ಲಿ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿ ಒಟ್ಟು 20,92,55,344 ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು. ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ, ಕಾರ್ಕಳ, ಬೈಂದೂರು ಹಾಗೂ ಬ್ರಹ್ಮಾವರ, ಅಭಿಯೋಜನ ಇಲಾಖೆ, ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಗಳ ಸಂಪೂರ್ಣ ಸಹಕಾರ ದೊಂದಿಗೆ ಲೋಕ್ ಅದಾಲತ್ನ್ನು ಯಶಸ್ವಿಗೊಳಿಸಲಾಯಿತು ಎಂದು ಪ್ರಕಟಣೆ ತಿಳಿಸಿದೆ. ಉಡುಪಿ ಜಿಲ್ಲೆಯ ಕೋರ್ಟ್ಗಳಲ್ಲಿ ಒಟ್ಟು 35,866 ಕೇಸುಗಳು ವಿಚಾರಣೆಗೆ ಬಾಕಿ ಇವೆ. ಇವುಗಳಲ್ಲಿ 20,263 ಕ್ರಿಮನಲ್ ಕೇಸುಗಳಾದರೆ, ಉಳಿದ 15,603 ಕೇಸುಗಳು ಸಿವಿಲ್ ಕೇಸುಗಳು.1998ರಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದಾಖಲಾದ ಪಾರ್ಟಿಷನ್ ಸೂಟ್ ವಿಚಾರಣೆಗೆ ಬಾಕಿ ಉಳಿದಿರುವ ಅತ್ಯಂತ ಹಳೆ ಪ್ರಕರಣವಾಗಿದೆ. 10 ಅಥವಾ ಅದಕ್ಕಿಂತ ಹೆಚ್ಚು ವರ್ಷಗಳಿಂದ 909 ಕೇಸುಗಳು ವಿಚಾರಣೆಗೆ ಬಾಕಿ ಉಳಿದಿದ್ದರೆ, 3,888 ಕೇಸುಗಳು 5ರಿಂದ 10 ವರ್ಷಗಳಿಂಗ ಕೋರ್ಟ್ನಲ್ಲಿ ಬಾಕಿ ಉಳಿದಿವೆ. 3,453 ಕೇಸುಗಳು 3ರಿಂದ 5ವರ್ಷಗಳಿಂದ ಬಾಕಿ ಉಳಿದಿದ್ದರೆ, 13,373 3ರಿಂದ 5ವರ್ಷಗಳವರೆಗಿನದ್ದಿವೆ. ಒಂದು ವರ್ಷದೊಳಗಿನ 14,243ಕೇಸುಗಳು ಉಡುಪಿ ನ್ಯಾಯಾಲಯಗಳಲ್ಲಿ ವಿಚಾರಣೆ-ತೀರ್ಪಿಗೆ ಬಾಕಿಯಾಗುಳಿದಿವೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”