ಉಡುಪಿ ಮತ್ತು ಮಂಗಳೂರು ವಕೀಲರ ಸಂಘದ ನಿಯೋಗದಿಂದ ಸಿಜೆ ಭೇಟಿ

ಉಡುಪಿ: ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿ ಆ.28 ರಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜರವರ ನೇತೃತ್ವದ ನಿಯೋಗವು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಬು ಭಕ್ರುರವರನ್ನು ಭೇಟಿಯಾಗಿ ಸಂಚಾರಿ ಪೀಠ ಕಾರ್ಯಾರಂಭದ ಬಗ್ಗೆ ಮನವರಿಕೆ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ನ್ಯಾಯಮೂರ್ತಿಗಳು, ಕರಾವಳಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯ ಸಾಧಕ - ಬಾಧಕಗಳ ಕುರಿತು ಅಧ್ಯಯನ ಮಾಡಿ ವರದಿ ನೀಡುವ ಬಗ್ಗೆ ಸಮಿತಿಯೊಂದನ್ನು ರಚಿಸಲಾಗುವುದು. ಹೈಕೋರ್ಟ್ ಸಂಚಾರಿ ಪೀಠ ತಾತ್ಕಾಲಿಕ ಕಾರ್ಯಾರಂಭಕ್ಕೆ ಪ್ರಸ್ತಾಪಿಸಿರುವ ಮಂಗಳೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ಸೆಪ್ಟೆಂಬರ್ ತಿಂಗಳಲ್ಲಿ ವೀಕ್ಷಿಸುವುದಾಗಿಯೂ ಭರವಸೆ ನೀಡಿದರು. ನಿಯೋಗದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ ಶೇಣವ, ಮಾಜಿ ಅಧ್ಯಕ್ಷ ರಾಘವೇಂದ್ರ ರಾವ್, ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಮತ್ತು ದ.ಕ. ಜಿಲ್ಲಾ ಸರಕಾರಿ ವಕೀಲ ಎಂ.ಪಿ. ನೊರೋನ್ಹ ಉಪಸ್ಥಿತರಿದ್ದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”