ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಸಿಜೆಎಮ್ ಎಮ್.ಪುರುಷೋತ್ತಮ್ ಆದೇಶ

ಉಡುಪಿ: ಮಲ್ಪೆ ಠಾಣೆಯ ಪ್ರಕರಣವೊಂದರಲ್ಲಿ ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶ ಹಾಗು ಸಿಜೆಎಮ್ ಎಮ್. ಪುರುಷೋತ್ತಮ್ ಅವರು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಆರೋಪಿಯನ್ನು ದ.ಕ ಜಿಲ್ಲೆಯ ಉಪ್ಪಿನಂಗಡಿ ತಾಲೂಕಿನ ಕೊಯ್ಲ ಗ್ರಾಮದ ಆರಿಫ್ ಎಂದು ಗುರುತಿಸಲಾಗಿದೆ. ವಾರೆಂಟ್ ಸಿಬ್ಬಂದಿಗಳಾದ ಸುರೇಶ್ ಕುಮಾರ್ ಮತ್ತು ವಿಶ್ವನಾಥ್, ಆರೋಪಿಯನ್ನು ಕೊಯ್ಲ ಗ್ರಾಮದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಮಾ.28 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”