ವಕೀಲರ ಸಂಘದ ಅಧ್ಯಕ್ಷರ ರಿಟ್ ಅರ್ಜಿ ವಜಾ

ಉಡುಪಿ: ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಅವರ ವೈಯಕ್ತಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಒ.ಎಸ್. ಸಂಖ್ಯೆ 10/2026 ದಾಖಲಾಗಿತ್ತು. ಜಿಲ್ಲಾ ನ್ಯಾಯಾಧೀಶರು 09-07-2026ರಂದು ಹೊರಡಿಸಿದ್ದ ಆಡಳಿತಾತ್ಮಕ ಆದೇಶದಂತೆ, ಪ್ರಕರಣವನ್ನು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಈ ವರ್ಗಾವಣೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ರೆನಾಲ್ಡ್ ಪ್ರವೀಣ್ ಕುಮಾರ್ ಅವರು ಕರ್ನಾಟಕ ಹೈಕೋರ್ಟ್ನಲ್ಲಿ ರಿಟ್ ಅರ್ಜಿ (ಸಂಖ್ಯೆ 23018/2026) ಸಲ್ಲಿಸಿದ್ದರು. ಆದರೆ, ಅರ್ಜಿಯ ಪ್ರಾಥಮಿಕ ವಿಚಾರಣೆ ನಡೆಸಿದ ಹೈಕೋರ್ಟ್ ಅದನ್ನು ವಜಾಗೊಳಿಸಿದೆ. ಇದರೊಂದಿಗೆ ಜಿಲ್ಲಾ ನ್ಯಾಯಾಧೀಶರು ಹೊರಡಿಸಿದ್ದ ಆಡಳಿತಾತ್ಮಕ ವರ್ಗಾವಣೆ ಆದೇಶವು ಯಥಾಸ್ಥಿತಿಯಲ್ಲಿ ಮುಂದುವರಿಯಲಿದ್ದು, ಜಿಲ್ಲಾ ನ್ಯಾಯಾಲಯದ ಕ್ರಮಕ್ಕೆ ಹೈಕೋರ್ಟ್ ಬೆಂಬಲ ವ್ಯಕ್ತಪಡಿಸಿದಂತಾಗಿದೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”