ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ವಿಶೇಷ ಕಾರ್ಯಕ್ರಮ

ಉಡುಪಿ: ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಆಟಿದ ಲೇಸು ಮತ್ತು ಸನ್ಮಾನ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಜ್ಯ ವಕೀಲರ ಪರಿಷತ್ ಸದಸ್ಯ ಪದ್ಮಪ್ರಸಾದ್ ಹೆಗ್ಡೆ ಅವರಿಗೆ ಉಡುಪಿ ವಕೀಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ನಂತರ ಮಾತನಾಡಿದ ಅವರು, ಉಡುಪಿ ವಕೀಲರ ಸಂಘವು, ಈ ನೆಲದ ಸಂಸ್ಕೃತಿಯನ್ನು ಯುವಪೀಳಿಗೆಗೆ ತಿಳಿಸುವ ಕಾರ್ಯಕ್ರಮ ಮಾಡಿದ್ದಾರೆ. ಇದೊಂದು ಮಾದರಿ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸುತ್ತಿರುವುದು ನನ್ನ ಸೌಭಾಗ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ವಹಿಸಿದ್ದರು. ವೇದಿಕೆಯಲ್ಲಿ ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ದೇವದಾಸ್.ವಿ.ಶೆಟ್ಟಿಗಾರ್, ಪ್ರ.ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಶ್ರೀನಾಥ್ ರಾವ್, ಉಡುಪಿ ಅಡ್ವೋಕೇಟ್ಸ್ ವೆಲ್ಫೇರ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ನ ಅಧ್ಯಕ್ಷ ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿದ್ದರು. ವಕೀಲರ ಸಂಘದ ಸೀನಿಯರ್ ಕೌನ್ಸಿಲ್ ವೈ.ಟಿ ರಾಘವೇಂದ್ರ ಸ್ವಾಗತಿಸಿದರು. ನ್ಯಾಯವಾದಿ ಅಖಿಲ್.ಬಿ.ಹೆಗ್ಡೆ ನಿರೂಪಿಸಿದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”