ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್ನಿಂದ ಗೌರವ

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದ, ಉಡುಪಿ ವಕೀಲರದ ಸಂಘದ ಸದಸ್ಯ ಸುಕೇಂದ್ರ ಅವರು ಜೆಎಮ್ಎಫ್ಸಿ ನ್ಯಾಯಧೀಶರಾಗಿ ಆಯ್ಕೆಯಾಗಿದ್ದು, ಇವರಿಗೆ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಅಧಿವಕ್ತ ಪರಿಷತ್ ಅಧ್ಯಕ್ಷ ಸಂತೋಷ್ ಹೆಬ್ಬಾರ್, ಉಡುಪಿ ವಕೀಲರ ಸಂಘದ ಮಾಜಿ ಕಾರ್ಯದರ್ಶಿ ರಾಜೇಶ್ ಎ.ಆರ್, ಮಾಜಿ ಸಾಂಸ್ಕತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಅಧಿವಕ್ತ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರೂರು ಸುಕೇಶ್ ಶೆಟ್ಟಿ, ಅಧಿವಕ್ತ ಪರಿಷತ್ ಪದಾಧಿಕಾರಿಗಳಾದ ಹಾಗೂ ನ್ಯಾಯವಾದಿ ಗಳಾದ ಶಶೀಕಲಾ ತೋನ್ಸೆ, ಬ್ರಹ್ಮಾವರ ವಕೀಲರ ಸಂಘದ ಉಪಾಧ್ಯಕ್ಷ ಕರ್ಜೆ ಬಾಲಕ್ರಷ್ಣ ಶೆಟ್ಟಿ, ಉಡುಪಿ ವಕೀಲರ ಸಂಘದ ಜೊತೆ ಕಾರ್ಯದರ್ಶಿ ಗಿರೀಶ್ ಎಸ್.ಪಿ ಏಳಿಂಜೆ, ವಕೀಲರ ಸಂಘದ ಮಾಜಿ ಜೊತೆ ಕಾರ್ಯದರ್ಶಿ ರವೀಂದ್ರ ಬೈಲೂರು, ನಾಗರಾಜ್ ಕಿನ್ನಿಮೂಲ್ಕಿ, ಆಶಿಶ್ ಶೆಟ್ಟಿ ಬೋಳ, ಸುಚಿತ ಶೆಟ್ಟಿ, ಕಾವ್ಯ ನಾಯ್ಕ್ , ಮೇಘನಾ, ಸುಚೇತಾ ಶೆಟ್ಟಿ, ಜಯಂತ್ ರಾವ್, ಪೆಲಾತ್ತೂರು ರೋಹಿತ್ ಆಚಾರ್ಯ , ಶ್ರೀನಿಧಿ ಸುವರ್ಣ, ಪ್ರಸನ್ನ ಶೆಣೈ, ಲೀವನ್ ಪ್ಲಾ ಮತ್ತು ಇತರರು ಉಪಸ್ಥಿತರಿದ್ದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”


