ಮುದರಂಗಡಿಯಲ್ಲಿ ನಡೆದ ಶೂಟೌಟ್ ಪ್ರಕರಣ

ಉಡುಪಿ: ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿಯಲ್ಲಿ ಮಾಜಿ ರೌಡಿಶೀಟರ್ ಡೇವಿಡ್ನನ್ನು ಗುಂಡಿಕ್ಕಿ ಕೊಂದ ಪ್ರಕರಣದಲ್ಲಿ ಭೂಗತ ಪಾತಕಿ HP ಸಹೋದರ ಕಿಶೋರ್ ಪೂಜಾರಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಮಂಗಳವಾರ ಪೋಲಿಸ್ ಕಸ್ಟಡಿಗೆ ಪಡೆಯಲಾಗಿದೆ. ಆರೋಪಿಗಳಾದ ಕಿಶೋರ್ ಪೂಜಾರಿ, ಸದಾನಂದ, ಚಿರಾಗ್ ಹಾಗು ಮಹಮ್ಮದ್ ಇರ್ಷಾದ್ನನ್ನು ಆ.24 ರವರೆಗೆ ಪೋಲಿಸ್ ಕಸ್ಟಡಿಗೆ ಪಡೆಯಲಾಗಿದೆ. ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶ ಹಾಗು ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ನ್ಯಾಯಧೀಶ ಎಮ್.ಪುರುಷೋತ್ತಮ್ ಅವರ ಮುಂದೆ ಆರೋಪಿಗಳನ್ನು ಪೋಲಿಸ್ ಕಸ್ಟಡಿಗೆ ನೀಡುವಂತೆ ಕೋರಿದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ 7 ದಿನ ಪೋಲಿಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”