ಬುಲೆಟ್ ಗ್ಯಾರೇಜ್ ಸಮೀಪ
ಉಡುಪಿ: ಇಂದ್ರಾಳಿಯ ಬುಲೆಟ್ ಗ್ಯಾರೇಜ್ ಸಮೀಪ ನವೀನ್ ಎಂಬವರ ಮೇಲೆ ಸುರೇಶ್ ಎಂಬವರು ಆ್ಯಸಿಡ್ ದಾಳಿ ನಡೆಸಿದ್ದಾರೆ ಎನ್ನಲಾದ ಘಟನೆ ಬುಧವಾರ ಸಂಜೆ ನಡೆದಿದೆ. ದಾಳಿಯಲ್ಲಿ ಗಾಯಗೊಂಡ ನವೀನ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ದಾಳಿಗೆ ಕಾರಣವೇನು, ಘಟನೆಯ ಹಿನ್ನೆಲೆ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಪೊಲೀಸರ ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”