112 ಗೆ ಕರೆ ಮಾಡಿ ಮಾಹಿತಿ ನೀಡಿದ್ದ ಭೂಪ

ಬ್ರಹ್ಮಾವರ: ಇಲ್ಲಿನ ಗಾಂಧಿನಗರದಲ್ಲಿ ನಡೆದ ಕೊಲೆಗೆ ಸಂಬಂಧಿಸಿ, ಆರೋಪಿ ಸೋಮವಾರ ಬೆಳಗ್ಗೆ 112 ಗೆ ಕರೆ ಮಾಡಿ, ತಪ್ಪೊಪ್ಪಿಕೊಂಡಿದ್ದಾನೆ. ನಂತರ ಪೋಲಿಸರು ಸ್ಥಳಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಅವರು ಸೋಮವಾರ, ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ಆರೋಪಿಯು ತನ್ನ ಹೆಸರನ್ನು ಶಾಹಿದ್ ಆಲಿ ಎಂದು ತಿಳಿಸಿದ್ದು, ಸ್ವಿಗ್ಗಿ, ಝೊಮೆಟೋ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ತಂದೆ ಮೆಹಬೂಬ್ ಅಲಿ ಹಾಗು ತಾಯಿ ಸಂಶದ್ ಬೇಗಂ ಅವರನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಲಾಗಿದೆ. ತಂದೆ ತನಗೆ ಮಾನಸಿಕ ಹಿಂಸೆ ಕೊಡುತ್ತಿದ್ದು, ದೈಹಿಕವಾಗಿ ಹೊಡೆಯುತ್ತಿದ್ದರು. ಇದಕ್ಕೆ ತಾಯಿಯೂ ಬೆಂಬಲ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ ಆರೋಪಿಯೂ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ವೈದ್ಯಕೀಯ ಪರೀಕ್ಷೆಯ ನಂತರ ಈ ಬಗ್ಗೆ ಖಚಿತ ಮಾಹಿತಿ ಸಿಗಲಿದೆ. ಸೋಕೋ ತಂಡ ಸಾಕ್ಷಿಗಳನ್ನು ಸಂಗ್ರಹಿಸುತ್ತಿದೆ ಎಂದರು. ನಂತರ ಸಂತ್ರಸ್ತರ ಕುಟುಂಬಿಕರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”