ವಶಕ್ಕೆ ಪಡೆದ ಬೈಂದೂರು ಪೋಲಿಸರು

ಉಡುಪಿ: ಮಾಜಿ ರೌಡಿಶೀಟರ್ ಡೇವಿಡ್ನನ್ನು ಆಗಸ್ಟ್ 7 ರಂದು ಮಧ್ಯಾಹ್ನ 3:45 ಗಂಟೆಗೆ ಕಾಪು ತಾಲೂಕು ಮುದರಂಗಡಿಯಲ್ಲಿ ಶೂಟರ್ ರಾಜು ಗುಂಡು ಹಾರಿಸಿ ಹತ್ಯೆ ಮಾಡಿದ್ದನು. ಅಂದು ರಾತ್ರಿ ಪೋಲಿಸರು ನಡೆಸಿದ ಕಾರ್ಯಾಚರಣೆಯಲ್ಲಿ ಶೂಟರ್ ರಾಜುವನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ವೇಳೆ ಪೋಲಿಸರಿಗೆ ಹಲ್ಲೆ ನಡೆಸಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಗಿತ್ತು. ನಂತರ ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೈಂದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸರ್ಕಾರಿ ನೌಕರರ ಮೇಲೆ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಆರೋಪಿ ರಾಜುವನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೋಲಿಸರು ತಿಳಿಸಿದ್ದಾರೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”