ಆರೋಪಿ ರಾಜು ಖಾತೆಗೆ ₹ 2 ಲಕ್ಷಕ್ಕೂ ಹೆಚ್ಚು ಹಣ ಪಾವತಿ ಆಗಿದೆ

ಉಡುಪಿ: ನಡೆದುಕೊಂಡು ಬಂದಿರುವ ಆರೋಪಿ ಹಾಗು ಬೈಕ್ನಲ್ಲಿ ಬಂದ ಆರೋಪಿಗಳು ಸೇರಿ ಡೇವಿಡ್ ಅವರನ್ನು 9 ಎಮ್ಎಮ್ ಪಿಸ್ತೂಲಿನಿಂದ ಗುಂಡು ಹಾರಿಸಿ, ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳನ್ನು ಬೈಂದೂರಿನ ಒತ್ತಿನೆಣೆ, ಭಟ್ಕಳ ಹಾಗು ಕುಮುಟಾದಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಅವರು ಶನಿವಾರ ಸಂಜೆ ಜಿಲ್ಲಾ ಎಸ್ಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಪ್ರಕರಣ ತನಿಖೆಯ ಬಗ್ಗೆ ಮಾಹಿತಿಯನ್ನು ವಿವರಿಸಿದರು. ಡೇವಿಡ್ ಡಿಸೋಜಾ ಅವರ ಹಿನ್ನಲೆ ಪರಿಶೀಲಿಸಿದಾಗ, ಅವರ ಮೇಲೂ ಶಿರ್ವ ಹಾಗು ಪಡುಬಿದ್ರೆ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಗುತ್ತಿಗೆ ಕೆಲಸ ಮಾಡಿಕೊಂಡಿದ್ದ ಅವರನ್ನು, ಆರ್ಥಿಕ ವ್ಯವಹಾರಕ್ಕೆ ಉತ್ತರಭಾರತದ ವ್ಯಕ್ತಿಗಳು ಸುಪಾರಿ ನೀಡಿ ಕೊಲೆ ಮಾಡಿಸಿರಬಹುದು ಎಂಬ ಅನುಮಾನ ಇದೆ. ಸುಪಾರಿ ಕೊಟ್ಟವರ ಪತ್ತೆಗಾಗಿ ಈಗಾಗಲೇ ಒಂದು ತಂಡವನ್ನು ಹೊರರಾಜ್ಯಕ್ಕೆ ಕಳುಹಿಸಲಾಗಿದೆ ಎಂದು. 4 ಗಂಟೆಗೆ ಕೃತ್ಯ ನಡೆದ ಬಳಿಕ ಆರೋಪಿಗಳು ಉಡುಪಿ ಜಿಲ್ಲೆಯನ್ನು ದಾಟದಂತೆ ಎಲ್ಲ ಗಡಿಭಾಗದಲ್ಲಿ ನಾಕಬಂಧಿ ಹಾಕಿದ್ದೇವು. ಉಡುಪಿ, ಭಟ್ಕಳ ರೈಲ್ವೇ ನಿಲ್ದಾಣದಲ್ಲಿ ತಪಾಸಣೆ ನಡೆಸಿದ್ದು, ರೈಲ್ವೇ ಪೋಲಿಸ್ ಹಾಗು ಉತ್ತರಕನ್ನಡ ಎಸ್ಪಿಯವರ ಸಹಾಯದೊಂದಿಗೆ ಬಿಗಿಬಂದೋಬಸ್ತ್ ನಡೆಸಲಾಗಿತ್ತು ಎಂದರು. ಬೈಂದೂರಿನ ಒತ್ತಿನೆಣೆ ಬಳಿಯಲ್ಲಿ ಬಸ್ ತಪಾಸಣೆ ನಡೆಸುತ್ತಿದ್ದ ಪೋಲಿಸರನ್ನು ಕಂಡು ಮೂರು ವ್ಯಕ್ತಿಗಳು ಬಸ್ನಿಂದ ಇಳಿದಿದ್ದಾರೆ. ಆಗ ರಾಜು ಎಂಬಾತನನ್ನು ಕಾಪು ಪಿಎಸ್ಐ ತೇಜಸ್ವಿ ಬೆನ್ನಟ್ಟಿದಾಗ, ಅವರಿಗೆ ಆರೋಪಿ ಹಲ್ಲೆ ನಡೆಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡುಹಾರಿಸಲಾಗಿದೆ. ಪಿಎಸ್ಐ ಹಾಗು ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಉಳಿದ ಇಬ್ಬರು ಆರೋಪಿಗಳನ್ನು ಭಟ್ಕಳ ಹಾಗು ಕುಮುಟಾದಲ್ಲಿ ಶನಿವಾರ ಬೆಳಗ್ಗೆ ಬಂಧಿಸಲಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದರು. ಆರೋಪಿ ರಾಜುವಿನ ಮೇಲೆ ಮಹಾರಾಷ್ಟ್ರ, ದೆಹಲಿ, ಉತ್ತರಪ್ರದೇಶ, ರಾಜಸ್ಥಾನ ಸೇರಿದಂತೆ 5 ರಾಜ್ಯಗಳಲ್ಲಿ ಕೊಲೆ, ಮಹಿಳೆಯರ ಮೇಲೆ ಹಲ್ಲೆ, ದರೋಡೆ ಸೇರಿದಂತೆ 26 ಪ್ರಕರಣಗಳಿವೆ. ಅನಮೋಲ್ ಮೇಲೆ 2018 ರ ನಂತರ 4 ರಾಜ್ಯಗಳಲ್ಲಿ 8 ಪ್ರಕರಣ ಹಾಗು ಜಿಯಾವುಲ್ ವಜುಲ್ ಶೇಖ್ ಮೇಲೆ ದರೋಡೆ, ಶೂಟೌಟ್, ಡಕಾಯಿತಿ ಸೇರಿದಂತೆ 12 ಪ್ರಕರಣಗಳಿವೆ ಎಂದರು. ಆರೋಪಿಗಳು ಎರ್ಮಾಳ್ ಬಳಿ ಬೈಕ್ ಅನ್ನು ಬಿಟ್ಟು ಹೋಗಿದ್ದಾರೆ. ಬೈಕ್ ಒದಗಿಸಿದವರು ಯಾರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆರೋಪಿ ರಾಜುವಿನಿಂದ 9 ಎಮ್ಎಮ್ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಆರೋಪಿಗಳಿಂದ 3 ಮೊಬೈಲ್ ಪೋನ್ಗಳು, ಸಿಮ್ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಗೆ ಒಬ್ಬರ ಪರಿಚಯ ಮತ್ತೊಬ್ಬರಿಗೆ ಸರಿಯಾಗಿ ಇರಲಿಲ್ಲ. ಸುಳ್ಳು ಹೆಸರು ಹೇಳಿಕೊಂಡು ಪರಿಚಯಿಸಿಕೊಂಡಿದ್ದರು. ಅಂದಾಜು 2 - 3 ಕೋಟಿಯ ವಿಚಾರಕ್ಕೆ ಡೇವಿಡ್ ಹಾಗು ಮತ್ತೋರ್ವ ಗುತ್ತಿಗೆದಾರನ ನಡುವೆ ವೈಮನಸ್ಸು ಉಂಟಾಗಿತ್ತು. ಆರೋಪಿಗಳು 2 ತಿಂಗಳ ಹಿಂದೆ ಸ್ಥಳಕ್ಕೆ ಆಗಮಿಸಿ, ಕೃತ್ಯಕ್ಕೆ ಸ್ಕೆಚ್ ಹಾಕಿದ್ದರು. ಅವರಿಗೆ ಯಾರೆಲ್ಲ ಸ್ಥಳೀಯರು ಯಾರು ಸಹಾಯ ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಸುಧಾಕರ್ ನಾಯ್ಕ್ ಹಾಗು ಉಡುಪಿ ಡಿವೈಎಸ್ಪಿ ಹಾಗು ಕಾರ್ಕಳ ಪ್ರಭಾರ ಡಿವೈಎಸ್ಪಿ ಬೆಳ್ಳಿಯಪ್ಪ ಉಪಸ್ಥಿತರಿದ್ದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”