ಬ್ರಹ್ಮಾವರ ಠಾಣಾ ವ್ಯಾಪ್ತಿಯ ಹನೇಹಳ್ಳಿಯಲ್ಲಿ ಬಂಧನ

ಬ್ರಹ್ಮಾವರ: ಹನೇಹಳ್ಳಿ ಗ್ರಾಮದ ಕೂರಾಡಿ ಮೇಲ್ಪೇಟೆ ಎಂಬಲ್ಲಿ ಮಾ.7ರಂದು ರಾತ್ರಿ ವೇಳೆ ಗರಗರ ಮಂಡಲ ಇಸ್ಪೀಟು ಜುಗಾರಿ ಆಡುತ್ತಿದ್ದ 10 ಮಂದಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಹರೀಶ್, ಗುರುರಾಜ್, ವೆಂಕಟೇಶ್ ಪೂಜಾರಿ, ಹರ್ಷ, ಸುರೇಶ್ ನಾಯ್ಕ, ರಾಜ ನಾಯ್ಕ, ಪೀಟರ್ ಡಿಮೆಲ್ಲೋ, ನಾಗೇಶ, ನಾಗರಾಜ, ರಾಜೇಶ ಬಂಧಿತ ಆರೋಪಿಗಳು. ಇವರಿಂದ 24500 ರೂ. ಮೌಲ್ಯದ 9 ಮೊಬೈಲ್ ಫೋನ್, 1.20ಲಕ್ಷ ರೂ. ಮೌಲ್ಯದ 3 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”