ಅರೋಪಿಗಳಿಬ್ಬರ ಬಂಧನ

ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಾ.9ರಂದು ರಾತ್ರಿ ವೇಳೆ ನಡೆದಿದೆ. ಕೊಲೆಗೀಡಾದವರನ್ನು ಕೆನರಾಡಿಯ ವನಜಾ ಪೂಜಾರ್ತಿ(60) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳಾದ ಸ್ಥಳೀಯ ನಿವಾಸಿ ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್ ಮೆಂಡೊನ್ಸಾ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್ ಮೆಂಡೊನ್ಸಾ ಅಣ್ಣ ತಮ್ಮಂದಿರ ಮಕ್ಕಳಾಗಿದ್ದು, ವನಜಾ ಪೂಜಾರ್ತಿ ಜೊತೆ ಆಗಾಗ್ಗೆ ವಲೇರಿಯನ್ ಮೆಂಡೊನ್ಸಾ ಅವರ ಮನೆಯಲ್ಲಿ ಮದ್ಯ ಸೇವನೆ ಮಾಡು ತ್ತಿದ್ದರು. ಮಾ.9ರಂದು ಸಂಜೆ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಇವರಿಬ್ಬರು ವನಜಾ ಪೂಜಾರ್ತಿ ಅವರನ್ನು ಹರಿತವಾದ ಆಯುಧದಿಂದ ಕೊಲೆ ಮಾಡಿರುವುದಾಗಿ ದೂರಲಾಗಿದೆ. ಈ ಘಟನೆ ಮಾ.10ರಂದು ಬೆಳಿಗ್ಗೆ 7ಗಂಟೆಗೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್, ಕಾಪು ವೃತ್ತ ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ, ಕಾಪು ಎಸ್ಸೈ ತೇಜಸ್ವಿ, ಮಣಿಪಾಲ ಕೆಎಂಸಿಯ ಫೋರೆನ್ಸಿಕ್ ತಜ್ಞರು, ಸೋಕೋ ತಂಡ, ಶ್ವಾನ ದಳ ಮತ್ತು ಫಿಂಗರ್ ಪ್ರಿಂಟ್ ವಿಭಾಗದ ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”