ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ ಹರಿರಾಂ ಶಂಕರ್ರಿಂದ ಆದೇಶ

ಉಡುಪಿ: ಜಿಲ್ಲೆಯ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಈ ಪೈಕಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಳತ್ತೂರು ಗ್ರಾಮದ ಅಬ್ದುಲ್ ಖಾದರ್ ಅವರ ಮಗ ಮಹಮ್ಮದ್ ನೌಫಿಲ್ ವಿರುದ್ಧ 5 ಪ್ರಕರಣ ದಾಖಲಾಗಿದ್ದು, ಶಿರ್ವ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಅಂತೆಯೇ ಮಲ್ಪೆ ಠಾಣಾ ವ್ಯಾಪ್ತಿಯ ಸುಹಾನ್ ವಿರುದ್ಧ ವಿವಿಧ ಠಾಣೆಯಲ್ಲಿ 4 ಪ್ರಕರಣ ದಾಖಲಾಗಿರುತ್ತದೆ. ಮಹಮ್ಮದ್ ನೌಫಿಲ್ನನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಸುಹಾನ್ನನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”