ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರದೀಪ್ ಪೂಜಾರಿ

ಉಡುಪಿ: ಹಿಂದೂ ಕಾರ್ಯಕರ್ತ ಪ್ರದೀಪ್ ಪೂಜಾರಿಯವರಿಗೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಪೆರ್ಡೂರು ಹಿತರಕ್ಷಣಾ ವೇದಿಕೆಯ ವತಿಯಿಂದ ನವೆಂಬರ್ 2ರಂದು ಹಿರಿಯಡ್ಕ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಅನಿರ್ದಿಷ್ಟಾವಧಿ ಧರಣಿಗೆ ಹಿಂದೂ ಜಾಗರಣ ವೇದಿಕೆ ಸಂಪೂರ್ಣ ಬೆಂಬಲ ಘೋಷಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ರಾಜೇಶ್ ಉಚ್ಚಿಲ, ಪ್ರದೀಪ್ ಪೂಜಾರಿಯವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಂಘಟನೆಯ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”