ಎಮ್ಜಿಎಮ್ ಮೈದಾನದಲ್ಲಿ ನಡೆದ ಅದ್ದೂರಿ ಉದ್ಘಾಟನಾ ಸಮಾರಂಭ

ಉಡುಪಿ: ನಗರದ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಎಮ್ಜಿಎಮ್ ಮೈದಾನದಲ್ಲಿ ಆಯೋಜಿಸಿದ್ದ ವಿಪಿಎಲ್ - 2 ಕ್ರಿಕೆಟ್ ಟೂರ್ನಮೆಂಟ್ ಅನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಉಡುಪಿಯಲ್ಲಿ ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ. ಜಿಲ್ಲೆಗೊಂದು ಕ್ರಿಕೆಟ್ ಸ್ಟೇಡಿಯಂ ಬೇಕು ಎಂಬುದು ಕ್ರಿಕೆಟ್ ಆಟಗಾರರ ಬಹುದಿನದ ಕನಸು. ಈ ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇನೆ. ಸುಸಜ್ಜಿತವಾದ ಕ್ರಿಕಟ್ ಸ್ಟೇಡಿಯಂ ನಿರ್ಮಾಣ ಮಾಡಲು ಸರಕಾರಕ್ಕೆ ಬೇಡಿಕೆ ಇಡುತ್ತೇನೆ ಎಂದರು. ಪ್ರಸಾದ್ ನೇತ್ರಾಲಯದ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಕೂಡ್ಲು, ವಕೀಲ ಶ್ರೀನಿಧಿ ಹೆಗ್ಡೆ, ಉದ್ಯಮಿ ಅಜಯ್.ಪಿ.ಶೆಟ್ಟಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಸುರೇಖಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್.ಡಿ.ರಾವ್, ಕ್ರೀಡಾ ಕಾರ್ಯದರ್ಶಿಗಳಾದ ಕಾರ್ತಿಕ್ ಹೆಬ್ರಿ, ನಿಶ್ಚಿತಾ ಉಪಸ್ಥಿತರಿದ್ದರು. ಕಾಲೇಜಿನ ಅಧ್ಯಕ್ಷರುಗಳಾದ ಶ್ರೀವತ್ಸ ಗಾಂವಸ್ಕರ್ ಸ್ವಾಗತಿಸಿ, ಶಮಂತ್ ವಂದಿಸಿದರು. ವಿದ್ಯಾರ್ಥಿ ದೀಪಕ್ ಕಾಮತ್ ಎಳ್ಳಾರೆ ನಿರೂಪಿಸಿದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”