ಅಖಂಡ ಭಾರತ ಸಂಕಲ್ಪ ದಿನಾಚರಣೆಯಲ್ಲಿ ದಿಕ್ಸೂಚಿ ಭಾಷಣಕಾರ
ಉಡುಪಿ: ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲೆಯಿಂದ "ಅಖಂಡ ಭಾರತ ಸಂಕಲ್ಪ ದಿನಾಚರಣೆ" ಹಾಗು ಪಂಜಿನ ಮೆರವಣಿಗೆ ಕಾರ್ಯಕ್ರಮವನ್ನು ಆ.11 (ಮಂಗಳವಾರ) ಸಂಜೆ 6.30 ರಿಂದ ಕಾರ್ಕಳದ ಬಂಡೀಮಠದಿಂದ ಜೋಡುರಸ್ತೆಯವರೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಲಿದ್ದ ಹಿಂಜಾವೇ ಪ್ರಾಂತ ಸಹ ಸಂಯೋಜಕ್ ಸತೀಶ್ ಪೂಜಾರಿಯವರನ್ನು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯನ್ನು ಪ್ರವೇಶಿಸಿದಂತೆ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾ ಎಸ್ಪಿಯವರ ವರದಿಯನ್ನು ಆಧರಿಸಿ, ಆ.11 ರಿಂದ ನ.10 ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಯಿಂದ ಹೊರಗಿರಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”