ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ಭಾಗಿ

ಕುಂದಾಪುರ: ಇಲ್ಲಿನ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಹಿರಿಯ ಸೂಲಗಿತ್ತಿ ಬಸ್ರೂರು ಗುಂಡಿಗೋಳಿ ಲಕ್ಷ್ಮಿ ಪೂಜಾರ್ತಿಯವರನ್ನು ಅತ್ಯಂತ ಹೆಮ್ಮೆಯಿಂದ ಅವರ ಸ್ವಗೃಹಕ್ಕೆ ತೆರಳಿ ಅಭಿನಂದಿಸಲಾಯಿತು. ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ, ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್ ಹಾಗೂ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ವೇತಾ ಶ್ರೀನಿಧಿ ಉಪಾಧ್ಯ, ವಿದ್ಯಾ ಸಾಲಿಯನ್, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಅನಿತಾ ಶ್ರೀಧರ್ ಉಪಸ್ಥಿತರಿದ್ದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”