ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಚಾಲನೆ

ಉಡುಪಿ: ಇಲ್ಲಿನ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ಪಾಸ್ ಕಾಮಗಾರಿ ಆರಂಭವಾಗಿ, ಕಾಪುವಿನಿಂದ ಉಡುಪಿ ಕಡೆಗೆ ಸಾಗುವ ಭಾಗವು ಸಂಪೂರ್ಣಗೊಂಡಿದೆ. ಶುಕ್ರವಾರ ಕಾಮಗಾರಿ ಪೂರ್ಣಗೊಂಡ ಭಾಗದ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ವಾಹನ ಸಂಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ್ ಪುಜಾರಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ.ಆರ್ ಮೆಂಡನ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾಮೋರ್ಚಾ ಮಾಜಿ ಅಧ್ಯಕ್ಷೆ ವೀಣಾ ಶೆಟ್ಟಿ ಉಪಸ್ಥಿತರಿದ್ದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”