ಖ್ಯಾತ ಸಾಹಿತಿ ಸುಕನ್ಯಾ ಕಳಸ ಹಾಗು ಸಾಹಿತಿ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ದಂಪತಿಗಳಿಗೆ ಗೌರಬ

ಉಡುಪಿ: ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಕಸಾಪ ಉಡುಪಿ ತಾಲೂಕು ಘಟಕದ ವತಿಯಿಂದ ಖ್ಯಾತ ಸಾಹಿತಿ ಸುಕನ್ಯಾ ಕಳಸ ಹಾಗು ಸಾಹಿತಿ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ದಂಪತಿಗಳನ್ನು ಗೌರವ ಪೂರ್ವಕವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸುಕನ್ಯ ಕಳಸ, ಈ ರೀತಿಯ ಗೌರವಗಳು ಮತ್ತಷ್ಟು ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ. ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ತನ್ನ ಹಲವಾರು ವಿನೂತನ ಕಾರ್ಯಕ್ರಮಗಳಿಂದ ರಾಜ್ಯದ ಮನೆ ಮಾತಾಗಿದೆ. ಈ ಕಾರ್ಯಕ್ರಮಗಳು ಮುಂದುವರೆಯಲಿ ಎಂದು ಶುಭ ಹಾರೈಸಿದರು. ಡಾ. ಮಹಾಬಲೇಶ್ವರ ರಾವ್ ಮಾತನಾಡಿ, ಮನೆಯಂಗಳದಲ್ಲಿ ನಡೆದ ಈ ವಿಶಿಷ್ಟ ಕಾರ್ಯಕ್ರಮ ಸಂತೋಷವನ್ನು ತಂದಿದೆ ಮುಂದೆಯೂ ಕೂಡ ಉತ್ತಮ ಕಾರ್ಯಕ್ರಮಗಳನ್ನು ನಡೆಯಲಿ ಎಂದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಗೌ. ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಂ.ಕಾಯ೯ದಶಿ೯ಗಳಾದ ಸತೀಶ್ ಕೊಡವೂರು, ರಾಘವೇಂದ್ರ ಪ್ರಭು ಕವಾ೯ಲು, ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ಧಾಬಸಯ್ಯ ಸ್ವಾಮಿ ಚಿಕ್ಕಮಠ, ಸದಸ್ಯರಾದ ದೀಪಾ ಕರ್ಕಿ ರಾಮಾಂಜಿ, ಅನಿತಾ ಸಿಕ್ವೇರಾ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ನಿರೂಪಿಸಿದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”