ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ಭೇಟಿ

ಬ್ರಹ್ಮಾವರ: ಇಲ್ಲಿನ ಚೇರ್ಕಾಡಿಯ ರಾಷ್ಟ್ರೋತ್ಥಾನ ಶಾಲೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಇತ್ತೀಚೆಗೆ ಭೇಟಿ ಮಾಡಲಾಯಿತು. ವಿದ್ಯಾಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಗುರುದಾಸ ಶೆಣೈ ಹೆಬ್ರಿ, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾಧ್ಯಕ್ಷ ಪಾಂಡುರಂಗ ಪೈ ಸಿದ್ಧಾಪುರ, ಕಾರ್ಯದರ್ಶಿ ಮಹೇಶ ಹೈಕಾಡಿ ಭೇಟಿ ನೀಡಿದರು. ರಾಷ್ಟ್ರೋತ್ಥಾನ ಸಂಸ್ಥೆಯ ಆಡಳಿತಾಧಿಕಾರಿ ಸುರೇಶ್ ಹೆಜಮಾಡಿ, ಪ್ರಧಾನಾಚಾರ್ಯೆ ಪೂರ್ಣಿಮಾ ಎಸ್.ಡಿ. ಕಾಲೇಜು ವಿಭಾಗದ ಪ್ರಾಂಶುಪಾಲೆ ಭಾಗ್ಯಲಕ್ಷೀ ಉಪಸ್ಥಿತರಿದ್ದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”