ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ

ಉಡುಪಿ: ಇಲ್ಲಿನ ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು, ಸದ್ರಿ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ಯಾಗುತ್ತಿರುವ ಹಿನ್ನೆಲೆ, ಸದ್ರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ ದಂಡಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅದೇಶಿಸಿರುತ್ತಾರೆ. ಮಂಗಳೂರಿನಿಂದ ಉಡುಪಿಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವಾ -ಮೂಡುಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗಬೇಕು ಅಥವಾ ಪಡುಬಿದ್ರೆ - ಬೆಳ್ಮಣ್ - ಶಿರ್ವಾ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತಲುಪಬೇಕು. ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ - ಮೂಡುಬೆಳ್ಳೆ- ಶಿರ್ವಾ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳಬೇಕು ಅಥವಾ ಮಣಿಪಾಲದಿಂದ ಶಿರ್ವಾ - ಬೆಳ್ಮಣ್ ಮಾರ್ಗವಾಗಿ ಪಡುಬಿದ್ರಿ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸಬೇಕು. ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ ) ರಲ್ಲಿ ಪ್ರದತ್ತವಾದ ಅಧಿಕಾರಿವನ್ನು ಚಲಾಯಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಗಳ ಕಚೇರಿ ಪ್ರಕಟಣೆ ತಿಳಿಸಿದೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”