ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡಾ ಹಾಗೆಯೇ ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತದೆ.
ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ. ನೀರು ನಿಂತಲ್ಲಿಯೇ ನಿಂತು ಮಡುಗಟ್ಟಿಹೋದರೆ ಕೆಸರಾಗುತ್ತದೆ, ಹರಿಯುತ್ತಿದ್ದರೆ ಅದು ತಿಳಿಯಾಗುತ್ತಾ ಹೋಗುತ್ತದೆ. ಸಾಮಾಜಿಕ ವ್ಯವಸ್ಥೆ ಕೂಡಾ ಹಾಗೆಯೇ ಪಟ್ಟಭದ್ರವಾಗಿ ಉಳಿಯದೆ ಚಲನಶೀಲತೆ ಪಡೆದುಕೊಂಡರೆ ಅದು ಜನಪರವಾಗಿ ಪರಿವರ್ತನೆಯಾಗುತ್ತದೆ. ಈ ದೃಷ್ಟಿಯಿಂದ ನನ್ನ ಲೇಖನದ ಬಗೆಗಿನ ಚರ್ಚೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮ ಖಾತೆಲಯಲ್ಲಿ ಬರೆದುಕೊಂಡಿರುವ ಅವರು, ಸಾಮಾಜಿಕ ನ್ಯಾಯದ ಬಗ್ಗೆ ನಾನು ಇದೇ ಮೊದಲ ಬಾರಿ ಮಾತನಾಡಿದ್ದಲ್ಲ, ನನ್ನ ನಾಲ್ಕು ದಶಕಗಳ ರಾಜಕೀಯ ಜೀವನವನ್ನು ನೋಡುತ್ತಾ ಬಂದವರಿಗೆ ಇದು ಗೊತ್ತಿರುತ್ತದೆ. ಅಧಿಕಾರ ಇರಲಿ, ಇಲ್ಲದೆ ಇರಲಿ ಸಾಮಾಜಿಕ ನ್ಯಾಯದ ಪರವಾದ ನನ್ನ ನಿಲುವು ಅಚಲ. ನಮ್ಮಲ್ಲಿನ ಜಾತಿ ವ್ಯವಸ್ಥೆ ಬಗ್ಗೆ ನನ್ನನ್ನು ಟೀಕಿಸುತ್ತಿರುವ ರಾಜಕಾರಣಿಗಳಿಗಿಂತ ಹೆಚ್ಚಿನ ಸ್ಪಷ್ಟತೆ ನನಗಿದೆ. ಈ ಬಗ್ಗೆ ನಾನು ಸಾರ್ವಜನಿಕ ಸಂವಾದಕ್ಕೆ ಸಿದ್ಧವಾಗಿದ್ದೇನೆ. ನನ್ನ ಲೇಖನದ ಬಗ್ಗೆ ಜಾತ್ಯತೀತ ಜನತಾದಳದ ನಾಯಕರಾದ ಕೇಂದ್ರ ಸಚಿವ ಎಚ್,ಡಿ ಕುಮಾರಸ್ವಾಮಿ ಅವರು ವ್ಯಕಪಡಿಸಿರುವ ಪ್ರತಿಕ್ರಿಯೆ ಓದಿ ಆಶ್ಚರ್ಯವಾಗಿಲ್ಲ, ಸಿದ್ದರಾಮಯ್ಯನವರು ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಅವರ ಆರೋಪವನ್ನು ತಮಾಷೆಯಾಗಿ ಸ್ವೀಕರಿಸಿದ್ದೇನೆ. ಕುಮಾರಸ್ವಾಮಿಯವರು ಮತ್ತು ಅವರ ಪೂಜ್ಯ ತಂದೆಯವರಾದ ಹೆಚ್.ಡಿ.ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ, ಅವರು ಸ್ವಜಾತಿ ವಿರೋಧಿಗಳು. ಅದಕ್ಕಿಂತಲೂ ಮುಖ್ಯವಾಗ ಕುಟುಂಬವಾದಿಗಳು. ಇವರಿಗೆ ತಮ್ಮ ಜಾತಿ ಒಂದು ಓಟ್ ಬ್ಯಾಂಕ್ ಅಷ್ಟೆ. ತಂದೆ ಮತ್ತು ಮಕ್ಕಳು ತಮ್ಮ ಕುಟುಂಬದ ಸ್ವಾರ್ಥಕ್ಕಾಗಿ ರಾಜಕೀಯ ಕ್ಷೇತ್ರದಲ್ಲಿ ಉಳಿದವರನ್ನು ಬಿಟ್ಟುಬಿಡಿ, ಸ್ವಜಾತಿ ನಾಯಕರು ಕೂಡಾ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು. ಹಿಂದೆ, ಇಂದು ಮತ್ತು ಮುಂದೆ ಜಾತ್ಯತೀತ ಜನತಾದಳದ ತುತ್ತತುದಿಯ ನಾಯಕರು ಗೌಡರ ಕುಟುಂಬದವರೇ ಆಗಿರುತ್ತಾರೆ" ಎನ್ನುವುದು ಸತ್ಯ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”