ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ಶುಕ್ರವಾರ ತಡರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ.
ಪಕ್ಷದೊಳಗಿನ ನಾಯಕತ್ವ ಸಮಸ್ಯೆ ಪರಿಹಾರವಾಗಲಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭರವಸೆ ಸಂತಸ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ. ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷರು ನಾಯಕತ್ವ ಗೊಂದಲ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ‘ಗೊಂದಲ ಬಗೆಹರಿಸುವುದಾದರೆ ಬಹಳ ಸಂತೋಷ’ ಎಂದು ಹೇಳಿದರು. ಸಾಮಾಜಿಕ ನ್ಯಾಯಕ್ಕೆ ಸಂಬಂಧಪಟ್ಟಂತೆ ಸೋಷಿಯಲ್ ಮೀಡಿಯಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ‘ಈ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದಷ್ಟೇ ಹೇಳಿದರು. ಬಾಗಲಕೋಟೆ ಗಲಭೆ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ, ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ಶುಕ್ರವಾರ ತಡರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಸ್ಪಷ್ಟಪಡಿಸಿದರು. ಅಲ್ಲಿಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ದು ಪರಿಹಾರ ನೀಡಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಅಧಿಕಾರಿಗಳು ನಮಗೆ ವರದಿ ನೀಡಲಿದ್ದು, ನಂತರ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”