ಭಾರತ ಸೇರಿದಂತೆ ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.
ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದಾರೆ. ಭಾರತ ಸೇರಿದಂತೆ ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಟ್ರಂಪ್, ತಕ್ಷಣವೇ ಜಾರಿಗೆ ಬರುವಂತೆ ಜಾಗತಿಕ ಸುಂಕವನ್ನು ಶೇ. 10ರಿಂದ ಶೇ. 15ಕ್ಕೆ ಹೆಚ್ಚಿಸುವುದಾಗಿ ಶನಿವಾರ ಘೋಷಿಸಿದ್ದಾರೆ. ಶುಕ್ರವಾರ ಸುಪ್ರೀಂ ಕೋರ್ಟ್ ತನ್ನ ಸುಂಕ ಕ್ರಮವನ್ನು ನಿಯಂತ್ರಿಸಲು ತೆಗೆದುಕೊಂಡ "ಅಸಾಧಾರಣ ಅಮೆರಿಕನ್ ವಿರೋಧಿ ನಿರ್ಧಾರ"ದ ಸಂಪೂರ್ಣ ಪರಿಶೀಲನೆಯ ನಂತರ, ನಮ್ಮ ಆಡಳಿತವು ಆಮದು ಸುಂಕಗಳನ್ನು "ಸಂಪೂರ್ಣವಾಗಿ ಅನುಮತಿಸಲಾದ ಮತ್ತು ಕಾನೂನುಬದ್ಧವಾಗಿ ಪರೀಕ್ಷಿಸಿ ಶೇ. 15ಕ್ಕೆ ಹೆಚ್ಚಿಸುತ್ತಿದೆ ಎಂದು ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್ಫಾರ್ಮ್ನಲ್ಲಿ ತಿಳಿಸಿದ್ದಾರೆ. ನಾನು, ಅಮೆರಿಕದ ಅಧ್ಯಕ್ಷನಾಗಿ, ತಕ್ಷಣವೇ ಜಾರಿಗೆ ಬರುವಂತೆ ಜಗತ್ತಿನ ಎಲ್ಲ ದೇಶಗಳ ಮೇಲಿನ ಶೇ. 10ರಷ್ಟು ಸುಂಕವನ್ನು ಕಾನೂನುಬದ್ಧವಾಗಿಯೇ ಶೇ. 15ಕ್ಕೆ ಹೆಚ್ಚಿಸಿದ್ದೇನೆ ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”